ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ತಲಗೋಡು ಗ್ರಾಮದ ರಸ್ತೆ ದುರಸ್ಥಿ ಮಾಡಲು ಜನಪ್ರತಿನಿಧಿಗಳು ನಿರ್ಲಕ್ಷ ದೋರಿರುವುದನ್ನು ಖಂಡಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಸಂಪೂರ್ಣವಾಗಿ ಬಹಿಷ್ಕಾರ ಮಾಡುತ್ತೇವೆಂಬ ಬ್ಯಾನರ್ ಪ್ರಕಟಿಸಿ ಜನಪ್ರತಿನಿಧಿಗಳನ್ನು ಎಚ್ಚರಿಸಿದ್ದಾರೆ.
ಗ್ರಾಮದ ಸಂಪೂರ್ಣ ಹದಗೆಟ್ಟಿರುವ ರಸ್ತೆ ಯನ್ನು ದುರಸ್ತಿ ಪಡಿಸುವಂತೆ ಈ ಹಿಂದೆಯೇ ಹಲವಾರು ಬಾರಿ ಮನವಿ ಮಾಡಿದ್ದರು ಕೂಡ ಅಧಿಕಾರಿ ವರ್ಗದಿಂದ ಯಾವುದೇ ಪ್ರತಿಕ್ರಿಯೆಗಳು ಈವರೆಗೆ ಬಂದಿಲ್ಲ, ಆದಕಾರಣ ಮುಂಬರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ಸ್ಥಳೀಯರೊಬ್ಬರು ತಿಳಿಸಿದರು.
ಹಲವಾರು ಭಾಗಗಳಿಗೆ ಸಂಪರ್ಕಿಸುವ ಸುಮಾರು 12 ಕಿಲೋಮೀಟರ್ ದೂರದಷ್ಟು ಉದ್ದದ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆಯನ್ನು ಸಮರ್ಪಕವಾಗಿ ಮಾಡಿಕೊಡುವ ವರೆಗೂ ನಮ್ಮ ಹೋರಾಟ ಜಗ್ಗದು ಆ ಕಾರಣದಿಂದಾಗಿ ಊರಿನ ಗ್ರಾಮಸ್ಥರು ಎಲ್ಲರೂ ಸೇರಿ ಪಕ್ಷಾತೀತವಾಗಿ ಈ ಹೋರಾಟವನ್ನು ಹಿಂದೆಯೇ ಆರಂಭಿಸಿದ್ದೆವು, ಆ ಹೋರಾಟಕ್ಕೆ ಜನಪ್ರತಿನಿಧಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ನಮ್ಮ ಹೋರಾಟವನ್ನು ತೀವ್ರವಾಗಿ ನಡೆಸುವ ಸಲುವಾಗಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಊರಿನ ಗ್ರಾಮಸ್ಥರೆಲ್ಲರೂ ಸೇರಿ ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಗ್ರಾಮದ ರಸ್ತೆ ದುರಸ್ತಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಅಧಿಕಾರಿ ವರ್ಗದವರ, ಜನಪ್ರತಿನಿಧಿಗಳ ಬಳಿ ಎಷ್ಟೇ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ ಆದ ಕಾರಣ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುತ್ತಿದ್ದೇವೆ. ಮಂಜುನಾಥ ಗ್ರಾಮಸ್ಥರು.
ತನು ಕೊಟ್ಟಿಗೆಹಾರ, ವರದಿಗಾರರು.


0 Comments