ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿಯ ಆಮ್ತಿ ಸಮೀಪ ರಸ್ತೆಗೆ ವಿದ್ಯುತ್ ಕಂಬವೊಂದು ಬಿದ್ದಿದೆ. 


ರಸ್ತೆಗೆ ಅಡ್ಡಲಾಗಿ ಕಂಬ ಬಿದ್ದ ಹಿನ್ನೆಲೆ ಒಂದು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು, ವಿದ್ಯುತ್ ಕಂಬ ಬೀಳುವ ವೇಳೆ ಅದೃಷ್ಟವಶಾತ್ ಯಾವುದೇ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿರಲಿಲ್ಲ, ಅಕಸ್ಮಾತ್ ಸಂಚಾರ ನಡೆಸುತ್ತಿದ್ದರೆ ಬಹಳ ದೊಡ್ಡ ಮಟ್ಟದ ಅವಘಡ ಉಂಟಾಗುತ್ತಿತ್ತು ಎಂದು ತಿಳಿದುಬಂದಿದೆ.

ನಂತರ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು, ಬಿದ್ದಿದ್ದ ವಿದ್ಯುತ್ ಕಂಬವನ್ನು ರಸ್ತೆಯಿಂದ ತೆರವುಗೊಳಿಸಿ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ತನು ಕೊಟ್ಟಿಗೆಹಾರ, ವರದಿಗಾರರು.