ಚಿಕ್ಕಮಗಳೂರು : ಸೆಪ್ಟೆಂಬರ್ 17 ರಂದು ಜಿಲ್ಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಬೃಹತ್ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಅವರು ಮಾಹಿತಿ ನೀಡಿದ್ದಾರೆ.
18 ವರ್ಷ ಮೇಲ್ಪಟ್ಟ ಎಲ್ಲಾ ವ್ಯಕ್ತಿಗಳು ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಸರ್ಕಾರ ಆದೇಶವನ್ನು ಹೊರಡಿಸಿದ್ದರಿಂದ ಬೃಹತ್ ಲಸಿಕಾಕರಣವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ತಿಳಿಸಿದ್ದಾರೆ.
ಲಸಿಕೆಯನ್ನು ಪಡೆಯದಿರುವ 18 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲಾ ಅರ್ಹ ನಾಗರೀಕರಿಗೆ ಕಡ್ಡಾಯವಾಗಿ ಲಸಿಕೆಯನ್ನು ಪಡೆದುಕೊಳ್ಳುವಂತೆ ಮನವೊಲಿಸಿ ಅವರಿಗೆ ಲಸಿಕೆಯನ್ನು ಹಾಕಿಸಬೇಕು ಎಂದು ಆದೇಶಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಶೃಂಗೇರಿ ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ದಯಾನಂದ್, ನಾಳೆ ತಾಲೂಕಿನ ಎಲ್ಲಾ ಕೇಂದ್ರಗಳಲ್ಲೂ ಲಸಿಕೆ ಲಭ್ಯವಿದೆ, ಅರ್ಹರು ತಪ್ಪದೇ ಆಧಾರ್ ಕಾರ್ಡ್ ನೊಂದಿಗೆ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು.
ಆರೋಗ್ಯ ಕ್ಷೇಮ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಲಸಿಕೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.






0 Comments