ಚಿಕ್ಕಮಗಳೂರು : 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ  ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ತರೀಕೆರೆ ಪಟ್ಟಣದ ಕೊಡಿಕ್ಯಾಂಪ್ ನಲ್ಲಿ ಈ ಘಟನೆ ನಡೆದಿದ್ದು, ತರೀಕೆರೆ ತಾಲೂಕಿನ 48 ವರ್ಷ ವಯಸ್ಸಿನ ಬಾಷಾ ಎಂಬಾತನಿಂದ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ, ತಿಂಡಿ ಕೊಡುವ ನೆಪದಲ್ಲಿ ಬಾಲಕಿಯನ್ನು  ಆರೋಪಿ ಭಾಷಾ ಕರೆದೊಯ್ದಿದ್ದಾನೆ. ಬಾಲಕಿ ಕೂಗುವ ಸದ್ದು ಕೇಳಿ ರಕ್ಷಣೆ ಮಾಡಲು  ಆಕೆಯ ಚಿಕ್ಕಮ್ಮ ಧಾವಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ  ಸ್ಥಳೀಯ ಯುವಕರು ಆರೋಪಿಯನ್ನು ಥಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ರೀತಿಯಾದ ಪ್ರಕರಣಗಳು ಹೆಚ್ಚಾಗುತ್ತಿದೆ, ಕಾನೂನಿನ ಭಯವಿಲ್ಲದೆ ಕಾಮುಕರು ಅತ್ಯಾಚಾರದಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ. ಪ್ರಸ್ತುತ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ತರೀಕೆರೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ತನು ಕೊಟ್ಟಿಗೆಹಾರ, ವರದಿಗಾರರು.