ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಗತ್ಯ ದಾಖಲಾತಿಗಳನ್ನು ಹೊಂದಿರದ 40 ವಾಹನಗಳನ್ನು ಚಿಕ್ಕಮಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಚಿಕ್ಕಮಗಳೂರಿನ ಚಂದ್ರದ್ರೋಣ ಗಿರಿ ಪರ್ವತದ ಆಸುಪಾಸಿನಲ್ಲಿ ಪ್ರತಿನಿತ್ಯ ಪ್ರವಾಸಿಗರನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಕರೆದೊಯ್ಯುವ ವಾಹನಗಳಲ್ಲಿ ಸೂಕ್ತ ದಾಖಲೆಗಳು ಇರದ ಕಾರಣ ಚಿಕ್ಕಮಗಳೂರಿನ ಗ್ರಾಮಾಂತರ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. 

ಈ ಕುರಿತಾಗಿ ಕೆಲ ದಿನಗಳ ಹಿಂದೆ ಎಲ್ಲಾ ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡಿ ಶೀಘ್ರವಾಗಿ ವಾಹಿದೆ ಮುಗಿದ ದಾಖಲಾತಿಗಳನ್ನು ಮತ್ತು ಸರಿಯಿಲ್ಲದ ದಾಖಲೆಗಳನ್ನು ಸರಿ ಮಾಡಿಕೊಳ್ಳಲು ಕಾಲಾವಕಾಶ  ನೀಡಲಾಗಿತ್ತು ಆದರೆ ದಾಖಲೆಗಳು ಇನ್ನೂ ಸರಿಯಾಗದ ಕಾರಣ ಮತ್ತು  ಸೂಕ್ತ ದಾಖಲೆಗಳನ್ನು ಹೊಂದಿರದ  ವಾಹನಗಳನ್ನು ಪೊಲೀಸರು  ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಸ್ತುತ 40 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಹಾಗೂ ಪರಿಶೀಲನೆ ನಡೆಸುವಂತೆ ಆರ್ ಟಿ ಓ ಅಧಿಕಾರಿಗಳಿಗೆ ಪೊಲೀಸರು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.