ಹಾಸನ :(ನ್ಯೂಸ್ ಮಲ್ನಾಡ್ ವರದಿ) ಪತ್ನಿಯ ಮೇಲೆ ಅನುಮಾನ ಪಟ್ಟು ಹತ್ಯೆ ಗೈದಿದ್ದ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೋರೇಗೌಡನಕೊಪ್ಪಲಿನ ಲವಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಶೀಲದ ಮೇಲೆ ಅನುಮಾನ ಪಟ್ಟು ಕೆಲದಿನಗಳ ಹಿಂದೆ ಮಾರಕಾಸ್ತ್ರಗಳಿಂದ ಪತ್ನಿ ಪಂಕಜಾಳನ್ನು ಮನೆಯಲ್ಲಿಯೇ ಹತ್ಯೆ ಮಾಡಿದ್ದ. ಈ ಕುರಿತು ಪಂಕಜಾ ಅವರ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಪೊಲೀಸರು ತನಿಖೆ ನಡೆಸಿ ಕೊನೆಗೆ ಪತಿ ಲವಕುಮಾರ್ ಅವರನ್ನು  ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಬಂಧಿಸಲಾಗಿದೆ ಹಾಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. 

ಈ ಪ್ರಕರಣವನ್ನು ಬಿಳಿಕೆರೆ ಠಾಣಾ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ ಭೇದಿಸಿದ್ದು ಮುಂದಿನ ವಿಚಾರಣೆಯನ್ನು ಆರಂಭಿಸಿದ್ದಾರೆ.