ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ಬಾಪೂಜಿ ನಗರದ ಗಂಗಾಮತ ಹಾಸ್ಟೆಲ್ ನ ಸಮೀಪ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಹಳೇ ದ್ವೇಷದ ಹಿನ್ನೆಲೆ ಈ ಘಟನೆ ನಡೆದಿರ ಬಹುದು ಎಂದು ಅಂದಾಜಿಸಲಾಗಿದೆ, ಸಂಪೂರ್ಣ ತನಿಖೆಯ ನಂತರ ವಿಷಯದ ಕುರಿತು ಸಂಪೂರ್ಣ ಮಾಹಿತಿ ದೊರಕಲಿದೆ.
ನಿನ್ನೆ ರಾತ್ರಿ ನಾಲ್ಕೈದು ದುಷ್ಕರ್ಮಿಗಳಿದ್ದ ಗುಂಪಿನಿಂದ ಈ ದುಷ್ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ, ಮೃತ ವ್ಯಕ್ತಿಯನ್ನು ಗಾಡಿ ಕೊಪ್ಪದ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಈತನು ಶೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಈ ಘಟನೆಯ ಕುರಿತು ಶಿವಮೊಗ್ಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0 Comments