ಚಿಕ್ಕಮಗಳೂರು : ವಾಯುಭಾರ ಕುಸಿತದಿಂದಾಗಿ ಜಿಲ್ಲೆಯಾದ್ಯಂತ ಮುಂದಿನ ಎರಡು - ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಎ.ಟಿ. ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ , ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ, ಹಾಗೂ ಚಿಕ್ಕಮಗಳೂರು ತಾಲೂಕುಗಳಲ್ಲಿ ಮುಂದಿನ ಎರಡು ಮೂರು ದಿನಗಳು ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಹವಾಮಾನ ಘಟಕದ ವಿಷಯ ತಜ್ಞರಾದ ಶ್ರೀಮತಿ ಶಬ್ನಮ್ ಪಿ.ಎಸ್. ತಿಳಿಸಿದ್ದಾರೆ. ರೈತರು ಹೊಲ ಗದ್ದೆಗಳಲ್ಲಿ ಕೆಲಸ ಮಾಡುವಾಗ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿಕೊಂಡು ಕೆಲಸ ಮಾಡಬೇಕೆಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು.

0 Comments