ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಪಟ್ಟಣದ ರಸ್ತೆ ಸಮೀಪದಲ್ಲೇ ಗೋ ಹತ್ಯೆ ನಡೆದಿದೆ.
ನರಸಿಂಹರಾಜಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಮಾಂಸಕ್ಕಾಗಿ ಹಸುವನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯನ್ನು ಅರಿತಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಈ ವಿಷಯವನ್ನು ತಿಳಿದ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಹಾಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಆರೋಪಿಗಳನ್ನು ಅಭಿಲಾಶ್,ಪ್ರಿನ್ಸ್, ಹಾಗೂ ಪ್ರಜ್ವಲ್ ಎಂಬ ಮೂವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಆರೋಪಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಗೋ ಹತ್ಯೆಯ ವಿರುದ್ಧವಾಗಿ ಕಠಿಣ ಕ್ರಮಗಳು ಜಾರಿಯಲ್ಲಿದ್ದರೂ ಕೂಡ ಈ ಭಾಗದಲ್ಲಿ ಅತೀ ಹೆಚ್ಚಿನ ಗೋ ಹತ್ಯೆ ನಡೆಯುತ್ತಿದೆ, ಆರೋಪಿಗಳಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಪೋಲಿಸರಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ.

1 Comments
Hindu gale heege madudre henge......yare aadru shikshe agbeku
ReplyDelete