ನರಸಿಂಹರಾಜಪುರ : ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ, ಮಳೆಯ ಪರಿಣಾಮ ರಸ್ತೆಯ ತುಂಬಾ ನೀರು ನಿಂತಿದೆ.
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ನರಸಿಂಹರಾಜಪುರ ಪಟ್ಟಣದಲ್ಲಿ ರಸ್ತೆಯ ಮೇಲೆ ನೀರು ನಿಂತಿದೆ. ಪರಿಣಾಮ ವಾಹನ ಸವಾರರು ವಾಹನದಲ್ಲಿ ಸಂಚಾರ ನಡೆಸಲು ಪರದಾಟ ನಡೆಸುತ್ತಿದ್ದಾರೆ. ತಾಲೂಕು ಕಚೇರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ವಾಹನ ಚಲಾಯಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.
ಮುಂದಿನ ಎರಡು ದಿನಗಳು ಮಳೆಯಾಗುವ ನಿರೀಕ್ಷೆ ಇದ್ದು ಕೇವಲ ಒಂದು ಗಂಟೆ ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ತುಂಬಾ ನೀರು ನಿಂತು ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ. ಕೊಟ್ಟಿಗೆಹಾರ, ಮೂಡಿಗೆರೆ, ಬಾಳೂರು, ಬಣಕಲ್ ಮುಂತಾದ ಕಡೆಗಳಲ್ಲಿ ಕೂಡ ಮಳೆಯಾಗುತ್ತಿದೆ.
ತನು ಕೊಟ್ಟಿಗೆಹಾರ, ವರದಿಗಾರರು.

0 Comments