ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಂಗಡಿಯ ಬೀಗವನ್ನು ಒಡೆದು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ದಿನಸಿ ಅಂಗಡಿಯಲ್ಲಿ ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ನೋಡಿದ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸಾರ್ವಜನಿಕರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಂಗಡಿಗೆ ನುಗ್ಗಿ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಹೊಂದಿದ್ದ ಬುಲೆಟ್ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಹೇರೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪೊಲೀಸರು ನಡೆಸಿದ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕರು ಅಭಿನಂದನೆ ಗಳನ್ನು ಸಲ್ಲಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗುಂಜನ್ ಆರ್ಯ ರವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

0 Comments