ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಮಹಾತ್ಮಾ ಗಾಂಧೀಜಿಯವರ ಜಯಂತಿಯ ಅಂಗವಾಗಿ ಇಂದು ನರಸಿಂಹರಾಜಪುರ ತಾಲೂಕು ಪಂಚಾಯತಿಯ ಆವರಣದಲ್ಲಿ ಶಾಸಕ ಟಿ.ಡಿ ರಾಜೇಗೌಡ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಇಬ್ಬರು ಮಹಾತ್ಮರಿಗೆ ಗೌರವವನ್ನು ಸಲ್ಲಿಸಿದರು.

ನಂತರದಲ್ಲಿ ಮಹಾತ್ಮ ಗಾಂಧೀಜಿ ಅವರ ಕನಸಾಗಿದ್ದ ಸ್ವಚ್ಛ ಗ್ರಾಮ ಸ್ವಚ್ಛ ಭಾರತದ ಪರಿಕಲ್ಪನೆಯ ಅಂಗವಾಗಿ ಹಾಗೂ ಎಲ್ಲರೂ ಸ್ವಚ್ಛತೆಗೆ ಪ್ರಾಶಸ್ತ್ಯ ನೀಡಬೇಕು ಎನ್ನುವ ಉದ್ದೇಶದಿಂದಾಗಿ ಆರು ಗ್ರಾಮಪಂಚಾಯತಿಗಳಿಗೆ ಕಸ ವಿಲೇವಾರಿ ಮಾಡುವ ವಾಹನಗಳನ್ನು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಆಯಾಯ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಅಧ್ಯಕ್ಷರು ಹಾಜರಿದ್ದರು.

ಬಳಿಕ ಶಾಸಕರ ಕಛೇರಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ತ್ರಿಚಕ್ರ ವಾಹನಗಳನ್ನು ಶಾಸಕರು ಹಸ್ತಾಂತರ ಮಾಡಿದರು. ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ಗೆ ಆಗಮಿಸಿದ ಶಾಸಕರು ವಿಶೇಷವಾಗಿ ಪೌರ ಕಾರ್ಮಿಕರೊಂದಿಗೆ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಿದರು.