ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಬಹುದಿನಗಳಿಂದ ಗಾಂಜಾ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಪ್ಪ ಪೊಲೀಸರು ಇಂದು ಬಂಧಿಸಿದ್ದಾರೆ.

ಹಲವಾರು ದಿನಗಳಿಂದ ಈ ದಂಧೆಯನ್ನು ನಡೆಸುತ್ತಿದ್ದ ಆರೋಪಿಗಳನ್ನು ಇಂದು ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಇಷ್ಟು ದಿನಗಳ ಕಾಲ ಕೈಗೆ ಸಿಗದ ಆರೋಪಿಗಳು ಇಂದು ಹರಿಹರಪುರದಿಂದ ಕೊಪ್ಪದ ಮಾರ್ಗದಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಆರೋಪಿಗಳು ಕೊಪ್ಪದ ಸ್ಥಳೀಯರಾಗಿದ್ದು ಸಂತೋಷ ಮತ್ತು ನೌಷದ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಮುಕ್ಕಾಲು ಕೆ.ಜಿ ಗಾಂಜಾ,ಯಮಹಾ ಬೈಕ್ ಮತ್ತು ಗಾಂಜಾ ಪ್ಯಾಕ್ ಮಾಡಲು ಬಳಸುತ್ತಿದ್ದ ಪೌಚ್ ಕವರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಗುಂಜನ್ ಆರ್ಯ ಐ.ಪಿ.ಎಸ್ ಹಾಗೂ ಪಿ.ಎಸ್.ಐ ಶ್ರೀನಾಥ್ ರೆಡ್ಡಿ ರವರ ತಂಡದ ಸಿಬ್ಬಂದಿಗಳನ್ನು ಇಲಾಖೆ ಹಾಗೂ ಸಾರ್ವಜನಿಕರು ಪ್ರಶಂಸಿಸಿದ್ದಾರೆ.