ಆಗುಂಬೆ : (ನ್ಯೂಸ್ ಮಲ್ನಾಡ್ ವರದಿ) ಆಗುಂಬೆ ಘಾಟಿಯಲ್ಲಿ ಈಚರ್ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ನಾಲ್ಕು ಜನರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಚಿಕ್ಕಮಗಳೂರು ಹಾಗೂ ಉಡುಪಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯ ತಿರುವಿನಲ್ಲಿ ಈಚರ್ ವಾಹನವು ಉರುಳಿದ ಪರಿಣಾಮ ವಾಹನದಲ್ಲಿದ್ದ ಒಂಬತ್ತು ಜನರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಇನ್ನುಳಿದ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದೆ. ವಾಹನವು ಕಾರ್ಕಳ ಮೂಲದ್ದಾಗಿದೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿ ಮೃತರನ್ನು ಕಂದಕದಿಂದ ಮೇಲೆತ್ತುವ ಪ್ರಯತ್ನ ಮಾಡುತ್ತಿದ್ದಾರೆ  ಈ ಘಟನೆಗೆ ನಿಖರ ಕಾರಣಗಳೇನು ಎಂದು ತನಿಖೆಯ ನಂತರದಲ್ಲಿ ತಿಳಿಯಬೇಕಿದೆ.