ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರ ಭಕ್ತರನ್ನು ನಿರ್ಮಾಣ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತ ದೇಶದಲ್ಲಿ ಇರದೇ ಹೋಗಿದ್ದರೆ, ನಮ್ಮ ದೇಶವು ಪಾಕಿಸ್ತಾನದಂತೆ ಆಗುತ್ತಿತ್ತು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಪ್ರಸ್ತುತ ದೇಶದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕರ್ನಾಟಕದ ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಇನ್ನೂ ಅನೇಕ ಹಿರಿಯರು ದೇಶಕ್ಕೆ ಕೊಡುಗೆ ನೀಡಿದ ಮಹಾನ್ ವ್ಯಕ್ತಿಗಳು ಆರ್ ಎಸ್ ಎಸ್ ನಿಂದ ಬಂದವರು, ರಾಷ್ಟ್ರೀಯತೆಯ ವಿಚಾರವುಳ್ಳವರು ಎಂದು ಹೇಳಿದರು.
ರಾಜ್ಯದ ಹಾಗೂ ದೇಶದ ಜನತೆಯ ಅಭಿವೃದ್ದಿಯ ಕುರಿತಾಗಿ ನಮಗೆ ಸಂಘವು ಶಿಕ್ಷಣ ನೀಡಿದೆ. ಆರ್ ಎಸ್ ಎಸ್ ಪರಿಕಲ್ಪನೆಯೇ ಎಚ್.ಡಿ.ಕುಮಾರಸ್ವಾಮಿಯವರಿಗಿಲ್ಲ ಅವರ ಮೆದುಳಿಗೆ ಪೊರೆ ಬಂದಿದೆ ಎಂದು ಕೆ ಎಸ್ ಈಶ್ವರಪ್ಪ ಅವರು ಕುಮಾರಸ್ವಾಮಿ ಅವರನ್ನು ಕುಟುಕಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತಾಗಿ ಕೆಟ್ಟ ರೀತಿಯ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅವರು ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಈ ಸಂದರ್ಭದಲ್ಲಿ ಆಗ್ರಹಿಸಿದರು.

0 Comments