ಬಣಕಲ್ : ನೇಣು ಬಿಗಿದುಕೊಂಡು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನ ಬಾನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಬಾನಹಳ್ಳಿಯ ಸರಸ್ವತಿ ಎಂಬ 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂಬ ಮಾಹಿತಿ ಲಭ್ಯವಾಗಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಹಂತದ ತನಿಖೆಯನ್ನು ಆರಂಭಿಸಿದ್ದಾರೆ ಹಾಗೂ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
ತನು ಕೊಟ್ಟಿಗೆಹಾರ, ವರದಿಗಾರರು.

0 Comments