ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ನಾಳೆಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ಮತ್ತು ತರೀಕೆರೆಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ತಾಪನೆಯ ಕಾರ್ಯಕ್ರಮವನ್ನು 30-10-2021 ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು
ಆದರೆ ಪುನೀತ್ ರಾಜ್ ಕುಮಾರ್ ರವರು ವಿಧಿವಶರಾಗಿದ್ದರಿಂದ ಕಾರ್ಯಕ್ರಮವನ್ನು ಮುಂದೂಡಲು ಸಿಎಂ ಬೊಮ್ಮಾಯಿಯವರ ವಿಶೇಷ ಕರ್ತವ್ಯಾಧಿಕಾರಿ ಸೂಚನೆಯನ್ನು ಹೊರಡಿಸಿದ್ದಾರೆ.

0 Comments