ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೆಳಗೂರು ಸಮೀಪದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಿಕ್ಕಮಗಳೂರು ತಾಲೂಕಿನ ಕೆಳಗೂರು ಕಬ್ಬಿಣ ಸೇತುವೆಯ ಸಮೀಪ ಸ್ಯಾಂಟ್ರೋ ಕಾರ್ ಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ವೇಗವಾಗಿ ಕಾರಿಗೆ ಗುದ್ದಿದ ಬಸ್ ಅಲ್ಲೇ ಇದ್ದ ಇನ್ನುಳಿದ ನಾಲ್ಕು ವಾಹನಗಳಿಗೆ ಗುದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಅಪಘಾತವಾದ ಸ್ಥಳಕ್ಕೆ ಆಗಮಿಸಿ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡ ವ್ಯಕ್ತಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮಲ್ಲಂದೂರು ಗ್ರಾಮದವರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದಲ್ಲಿ ಬಹಳ ಜನರು ಸೇರಿದ್ದಾರೆ. ಪೊಲೀಸರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

0 Comments