ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಉಡುಪಿಯ ವಿಠಲ್ ಡಿ. ಅಮೀನ್ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ವಿಠಲ್ ಅವರು ಮುಂಬೈ ನ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ದೊರೆತಿದೆ. ಅವರ ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂದು ಈ ವರೆಗೆ ತಿಳಿದು ಬಂದಿಲ್ಲ.
2018 ರಲ್ಲಿ ಇವರ ಹಿರಿಯ ಮಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು, ಈ ಘಟನೆಯಿಂದ ವಿಠಲ್ ಅವರು ಬಹಳ ರೋಸಿಹೋಗಿದ್ದರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಅಡುಗೆ ಕೆಲಸವನ್ನು ಬಿಟ್ಟು ಬೇರೆ ಕೆಲಸವನ್ನು ಹುಡುಕುವ ಸಲುವಾಗಿ ಕೊಪ್ಪಕ್ಕೆ ತೆರಳುತ್ತೇನೆ ಎಂದು ಹೇಳಿ ಅಕ್ಟೋಬರ್ 31 ರಂದು ಕೊಪ್ಪಕ್ಕೆ ಬಂದು, ಪೈ ಲಾಡ್ಜ್ ನಲ್ಲಿ ತಂಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ನಂತರದಲ್ಲಿ ಕೊಪ್ಪದ ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಯ ಕುರಿತಾಗಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0 Comments