ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿ ಜೂಜಾಟ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ನರಸಿಂಹರಾಜಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ   ಇಸ್ಪೀಟ್ ಅಡ್ಡೆ ಯ ಮೇಲೆ ದಾಳಿ ನಡೆಸಿ ಜೂಜಾಟ ಆಡುತ್ತಿದ್ದ ಎಳು ಜನರನ್ನು PSI ಹಾಗೂ ಪೊಲೀಸ್ ಸಿಬ್ಬಂದಿಗಳು   ಬಂಧಿಸಿದ್ದಾರೆ. ಬಂಧಿತರಿಂದ ಮೂವತ್ತು ಸಾವಿರ ನಗದು ಮತ್ತು ನಾಲ್ಕು ಮೋಟಾರ್ ಬೈಕ್ ಗಳನ್ನು ವಶಪಡಿಸಿ ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರವು ಆನ್ಲೈನ್ ಬೆಟ್ಟಿಂಗ್ ಗೆ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ ಎಲ್ಲೆಡೆ ಮತ್ತೊಮ್ಮೆ ಈ ರೀತಿಯ ಜೂಜಾಟ ಆರಂಭವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈ ಕುರಿತು  ಹೆಚ್ಚಿನ ಕಾರ್ಯಾಚರಣೆಯನ್ನು ನಡೆಸಿ ಇನ್ನಷ್ಟು ಜೂಜುಕೋರರ ಬಂಧನ ನಡೆಸುವ ಸಾಧ್ಯತೆಗಳಿವೆ.