ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನೀರಾ ಮೈನಾ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಕೊಲೆ ಬೆದರಿಕೆಯ ಪತ್ರ ರವಾನೆಯಾಗಿದೆ.
ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಸಮೀಪದಲ್ಲಿ ವಾಸವಿರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನೀರಾ ಮೈನಾ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಕೊಲೆ ಬೆದರಿಕೆಯ ಪತ್ರವೊಂದು ಬಂದಿದೆ.
ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಹಾಗೂ ಸಾಮಾಜಿಕ ಕಾರ್ಯಗಳನ್ನು ನಿಲ್ಲಿಸಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ. ಒಂದು ವೇಳೆ ನಿಲ್ಲಿಸದೆ ಹೋದಲ್ಲಿ ಹದಿನೈದು ದಿನಗಳಲ್ಲಿ ಕೊಲೆ ಮಾಡುವುದಾಗಿ ಪತ್ರದ ಮೂಲಕ ಅನಾಮಧೇಯ ವ್ಯಕ್ತಿಯು ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ.
ಈ ಕುರಿತಾಗಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನೀರಾ ಮೈನಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆದಷ್ಟು ಶೀಘ್ರವಾಗಿ ಪತ್ರ ರವಾನಿಸಿರುವ ಅನಾಮಧೇಯ ವ್ಯಕ್ತಿಯನ್ನು ಹುಡುಕಿ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೆನ್ನೀರಾ ಮೈನಾ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ರಕ್ಷಣೆ ನೀಡಬೇಕೆಂದು ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

0 Comments