ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪುರಸಭೆಯ ಮುಖ್ಯಾಧಿಕಾರಿ ಹೆಚ್ ಎನ್ ಮಂಜುನಾಥ್ ಅವರ ಮೇಲೆ ಸಾರ್ವಜನಿಕರಿಂದ ಬಂದ ಲಂಚದ ಆರೋಪದ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸೆರೆ ಹಿಡಿದಿದ್ದರು.

ಈ ಹಿಂದೆ ಕಡೂರು ಪುರಸಭೆಯ ಮುಖ್ಯಾಧಿಕಾರಿ ಹೆಚ್ ಎನ್ ಮಂಜುನಾಥ್  ಅವರ ಮೇಲೆ ವ್ಯಕ್ತಿಯೋರ್ವರು ನೀಡಿದ ದೂರಿನ ಮೇರೆಗೆ ಭ್ರಷ್ಟಾಚಾರ ನಿಗ್ರಹದಳದ ಡಿವೈಎಸ್ಪಿ ಗೀತಾ ಮತ್ತು ಅವರ ತಂಡದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ಭ್ರಷ್ಟ ಪುರಸಭೆಯ ಮುಖ್ಯಾಧಿಕಾರಿ ಹೆಚ್ ಎನ್ ಮಂಜುನಾಥ್ ಅವರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದರು.

ಈ ಹಿನ್ನೆಲೆ ಹೆಚ್ ಎನ್ ಮಂಜುನಾಥ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿರುವ ಆದೇಶವನ್ನು ಪೌರಾಡಳಿತದ ನಿದೇಶನಾಲಯದ ನಿರ್ದೇಶಕರು ಆದೇಶಿಸಿದ್ದಾರೆ. ಆರೋಪ ಸಾಬೀತಾದರೆ ಶಿಕ್ಷೆಯ ಪ್ರಮಾಣ ಪ್ರಕಟವಾಗುತ್ತದೆ. ಅಧಿಕಾರಿಗಳು ಈ ಕುರಿತು ತನಿಖೆ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ಈ ಕುರಿತಾದ ಸಂಪೂರ್ಣ ಮಾಹಿತಿ ದೊರಕಲಿದೆ.