ಚಿಕ್ಕಮಗಳೂರು : ಚಿಕ್ಕಮಗಳೂರಿನ ನಗರಸಭೆ ವತಿಯಿಂದ ಬರುವ ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಗರಸಭೆಯ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ, ಎಲ್ಲರೂ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಹೊರತು ಜನರಿಗೆ ಮೂಲಭೂತವಾಗಿ ಅವಶ್ಯಕವಾಗಿರುವ ನೀರಿನ ಸಮಸ್ಯೆಯನ್ನು ಪರಿಹರಿಸುವ  ಕುರಿತಾಗಿ ಯಾರೂ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ನಗರಸಭೆ ಬಿಡುವ ಕುಡಿಯುವ ನೀರಿನಲ್ಲಿ ಹುಳ, ಕಸ, ಕಡ್ಡಿ ಮುಂತಾದ ಕಾಯಿಲೆ ಉಂಟುಮಾಡುವ ಅಂಶಗಳು ಪತ್ತೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ, ಈ ನೀರನ್ನು ಕುಡಿದರೆ ಒಮಿಕ್ರಾನ್ ಅಲ್ಲದೆ ಬೇರೆ ವೈರಸ್ ನಮ್ಮ ಜೀವವನ್ನು ನಾಶ ಮಾಡುತ್ತದೆ ಎಂದು ಸಾರ್ವಜನಿಕರು ದೂರಿದ್ದಾರೆ. ಶುದ್ಧೀಕರಣ ಮಾಡಿ ನೀರನ್ನು ನೀಡುತ್ತಿದ್ದೇವೆ ಎಂದು ನಗರಸಭೆ ಅಧಿಕಾರಿಗಳು ತಿಳಿಸುತ್ತಾರೆ ಆದರೆ ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಜನರು ಆರೋಪಿಸುತ್ತಿದ್ದಾರೆ. 

ಈ ಕುರಿತು ಶೀಘ್ರವಾಗಿ ನಗರಸಭೆಯ ಅಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ನಗರಸಭೆಯ ನಿವಾಸಿಗಳು ಮನವಿ ಮಾಡಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು.