ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ, ಸಂಗಮೇಶ್ವರಪೇಟೆಯ ಸತೀಶ್ ಅವರು ಶಾಸಕರ ನಡೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಅವರ ನಡೆಯಿಂದ ಬೇಸತ್ತು ಪಕ್ಷ ಹಾಗೂ ಪಕ್ಷದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಂಗಮೇಶ್ವರ ಪೇಟೆಯ ಸತೀಶ್ ಅವರು ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ಈ ಕುರಿತಾದ ರಾಜೀನಾಮೆ ಪತ್ರವನ್ನು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಂಶುಮಂತ್ ಅವರನ್ನು ಒಳಗೊಂಡಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಾಗೂ ಕೆಪಿಸಿಸಿ ಉಸ್ತುವಾರಿಗಳಾದ ಧ್ರುವನಾರಾಯಣ್ ಅವರಿಗೂ ಕೂಡ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಚುನಾವಣೆ ಇನ್ನೇನು ಕೆಲವೇ ತಿಂಗಳುಗಳಲ್ಲಿ ಸಂಭವಿಸುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೊರ ಬರುತ್ತಿರುವುದು ಪಕ್ಷದ ಆಂತರಿಕ ವೈಮನಸ್ಸನ್ನು ಬೆಳಕಿಗೆ ತರುತ್ತಿದೆ.

0 Comments