ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಇನ್ನೇನು ಕೆಲವೇ ದಿನಗಳಲ್ಲಿ ನಿಗದಿಯಾಗಿರುವ ವಿಧಾನಪರಿಷತ್ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳು ಕೂಡ ತಮ್ಮ ತಮ್ಮ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ.
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಈ ಬಾರಿಯೂ ಗಾಯತ್ರಿ ಶಾಂತೇಗೌಡ ಅವರು ಸ್ಪರ್ಧಿಸಲಿದ್ದಾರೆ ಎಂದು ತಮ್ಮ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಭಾರತೀಯ ಜನತಾ ಪಾರ್ಟಿಯಿಂದ ಎಂ.ಕೆ ಪ್ರಾಣೇಶ್ ಅವರು ಬಹುತೇಕವಾಗಿ ಸ್ಪರ್ಧೆ ನಡೆಸುತ್ತಾರೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಕೂಡ ಕಾಂಗ್ರೆಸ್ ಪಕ್ಷದಿಂದ ಗಾಯತ್ರಿ ಶಾಂತೇಗೌಡ ಅವರು ಸ್ಪರ್ಧಿಸಿ ಸೋಲನ್ನು ಹೊಂದಿದ್ದರು, ಈ ಬಾರಿಯೂ ಅವರನ್ನು ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಖಂಡರ ಒಪ್ಪಿಗೆಯ ಮೇರೆಗೆ ಬೆಂಗಳೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಚರ್ಚಿಸಿ ಗಾಯತ್ರಿ ಶಾಂತೇಗೌಡ ಅವರನ್ನು ಸ್ಪರ್ಧೆಗಿಳಿಸಲಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಂದು ಘೋಷಣೆಯಾಗಿದ್ದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂದು ಕಾದು ನೋಡಬೇಕಿದೆ.

0 Comments