ಕೊಡಗು :(ನ್ಯೂಸ್ ಮಲ್ನಾಡ್ ವರದಿ) ಇನ್ನೇನು ಕೆಲವೇ ದಿನಗಳಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಈ ಚುನಾವಣೆ ಗೆಲ್ಲಲು ನಡೆಸಬೇಕಾದ ಎಲ್ಲಾ ಯೋಜನೆಗಳನ್ನು ಸರ್ವಪಕ್ಷಗಳೂ ನಡೆಸುತ್ತಿದೆ. ಮುಖ್ಯವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹಿರಿಯ ಮುಖಂಡರು ನಡೆಸುತ್ತಿದ್ದಾರೆ. ಈಗಾಗಲೇ ಹಲವರಿಗೆ ಟಿಕೆಟ್ ಖಚಿತವಾಗಿದೆ.
ಕೊಡಗು ಕ್ಷೇತ್ರದಿಂದ ಈ ಬಾರಿ ಸುಜಾ ಕುಶಾಲಪ್ಪ ಅವರಿಗೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಸುಜಾ ಅವರು ಕಳೆದ ಬಾರಿ ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ವಂಚಿತರಾಗಿದ್ದರು ಆದರೆ ಈ ಬಾರಿ ಭಾರತೀಯ ಜನತಾ ಪಾರ್ಟಿ ಅವರನ್ನು ಗುರುತಿಸಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಸುಜಾ ಕುಶಾಲಪ್ಪ ಅವರು ಬಿಜೆಪಿಯ ಜಿಲ್ಲಾಧ್ಯಕ್ಷರಾಗಿದ್ದಾರೆ ಹಾಗೂ ಪಕ್ಷದ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ವಿರಾಜಪೇಟೆ ಮೂಲದ ಸುಜಾ ಕುಶಾಲಪ್ಪ ಹೆಸರು ಘೋಷಣೆಯಾಗುತ್ತಿದ್ದಂತೆ ಅವರ ಆಪ್ತ ವಲಯದಲ್ಲಿ ಸಂತಸ ವ್ಯಕ್ತವಾಗಿದೆ.

0 Comments