ಮೂಡಿಗೆರೆ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ಪತ್ತೆ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲೆಯ ಹಲವೆಡೆಗಳಲ್ಲಿ ಈ ಹಿಂದೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿದ್ದರು ಜಿಲ್ಲೆಯಲ್ಲಿ ಮತ್ತೆ ಗಾಂಜಾ ಚಟುವಟಿಕೆಗಳು ಕಂಡುಬಂದಿದ್ದು ಪೊಲೀಸರು ಹೆಚ್ಚಿನ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಲ್ಲಿ ಬೈಲ್ ವೃತ್ತದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 43 ಗ್ರಾಂ ಗಾಂಜಾವನ್ನು ಅಬಕಾರಿ ಪೊಲೀಸರು ಆರೋಪಿಯ ಸಮೇತ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬಿಳಗುಳ ಗ್ರಾಮದ ಆಲ್ಬರ್ಟ್ ಡಿಸೋಜ ಬಿನ್ ಫ್ರಾನ್ಸಿಸ್ ಡಿಸೋಜ ಎಂದು ಗುರುತಿಸಲಾಗಿದೆ.
ಘಟನೆಯ ಕುರಿತಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪವಿಭಾಗದ ನಿರೀಕ್ಷಕರಾದ ಲೋಕೇಶ್, ಸಿಬ್ಬಂದಿಗಳಾದ ಮುಖ್ಯಪೇದೆ ಸಂತೋಷ್, ಅಬಕಾರಿ ಪೇದೆಗಳಾದ ಬಸವರಾಜು ಬಂಗಾರಿ, ಶಂಕರ್ ಗುರುವ, ಹಾಗೂ ಚಾಲಕ ಪ್ರಸನ್ನಕುಮಾರ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ತನು ಕೊಟ್ಟಿಗೆಹಾರ, ವರದಿಗಾರರು.

0 Comments