ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಪಟ್ಟಣ ಪಂಚಾಯ್ತಿ ಸದಸ್ಯೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ನರಸಿಂಹರಾಜಪುರ ಪಟ್ಟಣ ಪಂಚಾಯ್ತಿಯ ಸದಸ್ಯರಾಗಿರುವ ಜುಬೇದ ಅವರು ತಮ್ಮ ಸಾವಿಗೆ ಪಕ್ಷದ ಮುಖಂಡರುಗಳು ಕಾರಣ ಎಂದು ತಮ್ಮ ಮೊಬೈಲ್ ನ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಹಳೆಯ ಮಾತುಕತೆಯಂತೆ ಅಧ್ಯಕ್ಷ ಸ್ಥಾನವನ್ನು ಪ್ರಸ್ತುತ ಅಧ್ಯಕ್ಷರಾದ ಸುರಯ್ಯ ಬಾನು ಅವರು ರಾಜೀನಾಮೆ ನೀಡದೆ ಜುಬೇದ ಬಾನು ಅವರಿಗೆ ಬಿಟ್ಟು ಕೊಡದ ಕಾರಣ, ಜುಬೆದ ಬಾನು ಅವರು ಹಲವು ಬಗೆಯ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಯ ಯತ್ನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಅವರನ್ನು ನರಸಿಂಹರಾಜಪುರದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಶಿವಮೊಗ್ಗದ ಆಸ್ಪತ್ರೆಗೆ ತುರ್ತಾಗಿ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

0 Comments