ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗಿವೆ. ಶಾಲೆಗಳಲ್ಲಿ ಕಳ್ಳತನವಾದ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಚಿಕ್ಕಮಗಳೂರು ಪೊಲೀಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗಷ್ಟೆ ಕಳಸಾಪುರ ಹಾಗೂ ಇಂದಾವರ ಗ್ರಾಮದಲ್ಲಿರುವ ಶಾಲೆಗಳಲ್ಲಿದ್ದ ಕಂಪ್ಯೂಟರ್, ಲ್ಯಾಪ್ ಟಾಪ್, ಬ್ಯಾಟರಿ, ಅಡುಗೆ ಮಾಡಲು ಬಳಸುವ ಗ್ಯಾಸ್ ಸ್ಟವ್, ಫ್ಯಾನ್, ಟಿವಿ ಮತ್ತು ಮೊಬೈಲ್ ಫೋನ್ ಗಳ ಕಳ್ಳತನವಾಗಿತ್ತು. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದರು ಮತ್ತು ಕಾರ್ಯಾಚರಣೆ ನಡೆಸುತ್ತಿದ್ದರು.
ಶಾಲೆಗಳ ವಸ್ತುಗಳನ್ನು ದೋಚಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು ಕದ್ದಿದ್ದ ಕಂಪ್ಯೂಟರ್, ಲ್ಯಾಪ್ ಟಾಪ್, ಬ್ಯಾಟರಿ, ಅಡುಗೆ ಮಾಡಲು ಬಳಸುವ ಗ್ಯಾಸ್ ಸ್ಟವ್, ಫ್ಯಾನ್, ಟಿವಿ ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ ಒಟ್ಟು 1.81 ಲಕ್ಷ ರೂಪಾಯಿಗಳ ವಸ್ತುಗಳು ಪೊಲೀಸರಿಗೆ ಸಿಕ್ಕಿದೆ. ಆರೋಪಿಗಳನ್ನು ವಶಕ್ಕೆ ಪಡೆದು ಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

0 Comments