ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಜೂಜಾಟದಲ್ಲಿ ತೊಡಗಿದ್ದವರನ್ನು ಕಾರ್ಯಾಚರಣೆಯನ್ನು ನಡೆಸುವ ಮೂಲಕ ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜೂಜಾಟ, ಬೆಟ್ಟಿಂಗ್ ದಂಧೆಯು ರಾಜ್ಯಾದ್ಯಂತ ನಡೆಯುತ್ತಿದ್ದು, ವಿಚಾರ ತಿಳಿದ ಕೂಡಲೇ ಪೊಲೀಸರು ಕಾರ್ಯ ಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.
ಶಿವಮೊಗ್ಗದ ಚಾಲುಕ್ಯ ಬಾರ್ ಎದುರಿನ ನರಸಿಂಹ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಎಂಟು ಜನರನ್ನು ವಿನೋಬನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನರಸಿಂಹ, ವೆಂಕಟೇಶ್, ಇಸ್ಮಾಯಿಲ್, ಕಿರಣ್, ಸಾಯಿಕುಮಾರ್, ಪ್ರವೀಣ್, ಯೋಗಿಶ ಮತ್ತು ಕೃಷ್ಣ ಎಂಬುವ ಆರೋಪಿಗಳು ಬಂಧಿತರು. ಬಂಧಿತರಿಂದ 13,025 ರೂಪಾಯಿ ಹಣ ಹಾಗೂ ಜೂಜಾಟಕ್ಕೆ ಬಳಕೆ ಮಾಡುತ್ತಿದ್ದ 5 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಈ ದಾಳಿಯನ್ನು ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ರವಿ, ಪಿಎಸ್‌ಐ ಮಂಜುನಾಥ ಸಿದ್ದಪ್ಪ ಹಾಗೂ ಸಿಬ್ಬಂದಿಗಳಾದ ಮಂಜುನಾಥ್, ಪ್ರದೀಪ್, ಸುರೇಶ್, ರುದ್ರೇಶ್, ಮಲ್ಲಪ್ಪ ಇದ್ದರು. ಪ್ರಕರಣದ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು. ಇನ್ನಷ್ಟು ಜನರು ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

0 Comments