ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಕಸ ತ್ಯಾಜ್ಯ ಸಂಗ್ರಹಣೆ ಮಾಡಲು ಹೋದ ಪೌರಕಾರ್ಮಿಕರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದಲ್ಲಿ ಕಸ ಸಂಗ್ರಹಣೆ ಮಾಡಲೆಂದು ತೆರಳಿದ್ದ ಪೌರಕಾರ್ಮಿಕರ ಮೇಲೆ ಕೆಲ ಕಿಡಿಗೇಡಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪೆಟ್ಟಾಗಿದ್ದ ಪೌರಕಾರ್ಮಿಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪೌರಕಾರ್ಮಿಕರ ಆರೋಗ್ಯ ಸ್ಥಿತಿಯನ್ನು ವಿಚಾರಿಸುವ ಸಲುವಾಗಿ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಕೆ ಎಸ್ ಈಶ್ವರಪ್ಪ ಅವರು ಭೇಟಿ ನೀಡಿ ಹಲ್ಲೆಗೊಳಗಾದ ವ್ಯಕ್ತಿಗಳ ಆರೋಗ್ಯ ವಿಚಾರಣೆ ನಡೆಸಿ ವೈದ್ಯರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡುವಂತೆ ತಿಳಿಸಿದರು.
ಪೊಲೀಸರು ಘಟನೆಯ ಕುರಿತಾಗಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ. ಜನರ ಸೇವೆ ಮಾಡುವ ಪೌರ ಕಾರ್ಮಿಕರ ಮೇಲಿನ ಹಲ್ಲೆ ಖಂಡನೀಯ, ಈ ಕೃತ್ಯ ಎಸಗಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.
ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೆ ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಇ ಕಾಂತೇಶ್, ಮಾಜಿ ಮೇಯರ್ ಸುವರ್ಣಾ ಶಂಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

0 Comments