ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತಿದ್ದು ಅತೀ ಹೆಚ್ಚಿನ ಅನಾಹುತಗಳು ಸಂಭವಿಸುತ್ತಿದೆ. 

ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಗೋಡೆ ಬಿದ್ದು ವ್ಯಕ್ತಿಯು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಪುರದಲ್ಲಿ ನಡೆದಿದೆ. ಯಗಟಿಪುರದ ಭೋವಿ ಕಾಲೋನಿಯ ಮಂಜುನಾಥ್ ಎಂಬುವವರ ಮೇಲೆ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅಲ್ಲೇ ಮಲಗಿದ್ದ ಮಂಜುನಾಥ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಭಾರೀ ಮಳೆಯಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಕುರಿತು ಕಡೂರು ತಾಲೂಕಿನ ಯಗಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು.