ಚಿಕ್ಕಮಗಳೂರು : ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಕಾಮುಕನೋರ್ವ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಅತ್ಯಾಚಾರದ ವಿರುದ್ಧವಾಗಿ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಕೂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ಈ ರೀತಿಯ ಘಟನೆಗಳು ನಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದ ಹದಿನಾರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿಯನ್ನು ಬಾಳೂರು ಹಳ್ಳಿಕೆರೆ ಮೂಲದ ಸುದೀಪ್ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಆರೋಪಿ ಸುದೀಪ್ ನನ್ನು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಬಂಧಿಸಿದ್ದಾರೆ. ಅತ್ಯಾಚಾರದ ಕುರಿತಾಗಿ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಗಳನ್ನು ಆರೋಪಿಯ ಮೇಲೆ ಜರುಗಿಸಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ಕೆಟ್ಟ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕೆಂದು ಸ್ಥಳೀಯರು ಹಾಗೂ ಸಾರ್ವಜನಿಕರು ಕೋರಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು.

0 Comments