ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿರುವ ಎಂ.ಕೆ ಪ್ರಾಣೇಶ್ ಅವರು  ಇಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.

ಡಿ. 10 ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್  ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಗಾಯತ್ರಿ ಶಾಂತೇಗೌಡ ಸ್ಪರ್ಧೆ ಮಾಡುತ್ತಿದ್ದಾರೆ, ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಮಗಳೂರು ಜಿಲ್ಲೆಯಿಂದ ಎಂ.ಕೆ ಪ್ರಾಣೇಶ್ ಸ್ಪರ್ಧೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಗೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಆಗಮಿಸಿದ ಎಂಕೆ ಪ್ರಾಣೇಶ್ ಅವರು ನಾಮಪತ್ರ ಸಲ್ಲಿಕೆ ನಡೆಸಿದ್ದಾರೆ. ಬಹಳಷ್ಟು ಜನ ಬಿಜೆಪಿಯ ಕಾರ್ಯಕರ್ತರು, ಬಿಜೆಪಿಯ ಗ್ರಾಮಪಂಚಾಯತ್ ತಾಲೂಕು ಪಂಚಾಯತ್ ಸದಸ್ಯರು ಹಾಗೂ ಮುಖಂಡರುಗಳು ಮತ್ತು ಪ್ರಾಣೇಶ್ ಬೆಂಬಲಿಗರು ಈ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ಸಹ ಇಂದು ತಮ್ಮ ಬೆಂಬಲಿಗರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿಗರ ಮಧ್ಯೆ ಕೆಲಕಾಲ ಘೋಷಣೆಗಳ ಯುದ್ಧ ನಡೆಯಿತು ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.