ಹಾಸನ : (ನ್ಯೂಸ್ ಮಲ್ನಾಡ್ ವರದಿ) ಅಕ್ಟೋಬರ್ 28 ರಂದು ಬಾಗಿಲು ತೆರೆದು ಅಂದಿನಿಂದ ಇಂದಿನವರೆಗೆ ಲಕ್ಷಾಂತರ ಜನ ಭಕ್ತರಿಗೆ ದರ್ಶನ ನೀಡಿದ್ದ ಹಾಸನದ ಅಧಿದೇವತೆ ಹಾಸನಾಂಬ ದೇವಿಯ ದೇಗುಲದ ಗರ್ಭಗುಡಿಯ ಬಾಗಿಲು ಇಂದು ಮಧ್ಯಾಹ್ನದ ವೇಳೆಗೆ ಮುಚ್ಚಿದೆ.
ಈ ದೇವಾಲಯವು ಮುಂದಿನ ಒಂದು ವರ್ಷಗಳ ಕಾಲ ಸಂಪೂರ್ಣವಾಗಿ ಮುಚ್ಚಿರಲಿದೆ. ಇಂದು ಬೆಳಗ್ಗಿನಿಂದ ಭಕ್ತರು ದೇವಾಲಯಕ್ಕೆ ಬಾರದಂತೆ ಸೂಚಿಸಲಾಗಿತ್ತು. ಮುಂಜಾನೆಯಿಂದ ಕ್ರಮಬದ್ಧವಾಗಿ ದೇವಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಬಳಿಕ ದೇವಸ್ಥಾನದ ಅರ್ಚಕರು ಪದ್ಧತಿಯಂತೆ ದೇವಸ್ಥಾನವನ್ನು ಗಣ್ಯರ ಸಮ್ಮುಖದಲ್ಲಿ ಮುಚ್ಚಿದರು.
ಕೇವಲ ಹತ್ತು ದಿನಗಳಲ್ಲಿ ಲಕ್ಷಾಂತರ ಜನ ಭಕ್ತರು ದೇವಿಯ ದರ್ಶನವನ್ನು ಪಡೆದಿರುವುದು ಇಲ್ಲಿನ ಪಾವಿತ್ರ್ಯತೆಯನ್ನು ಮತ್ತೊಮ್ಮೆ ಎತ್ತಿ ಹಿಡಿದಿದೆ. ಬೆಟ್ಟದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವ್ಯವಸ್ಥಿತವಾಗಿ ಸಕಲ ವ್ಯವಸ್ಥೆಗಳನ್ನು ಕಾಪಾಡಿದ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಸರ್ವರಿಗೂ ದೇವಾಲಯದ ಮಂಡಳಿ ಧನ್ಯವಾದಗಳನ್ನು ಸಲ್ಲಿಸಿದೆ. ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲಾಧಿಕಾರಿ ಮತ್ತು ಗಣ್ಯರ ಸಮ್ಮುಖದಲ್ಲಿ ದೇಗುಲದ ಬಾಗಿಲನ್ನು ಮುಚ್ಚಲಾಗಿದೆ.

0 Comments