ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಟಾರ್ ಸೈಕಲ್ ಕಳ್ಳತನ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಬೈಕ್ ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಕದ್ದಿದ್ದ ಐದು ಮೋಟಾರ್ ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಿಂದ ವಶಪಡಿಸಿಕೊಂಡ ವಾಹನದ ಮೌಲ್ಯ ಅಂದಾಜು ಎರಡು ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಈ ಪ್ರಕರಣವನ್ನು ಶ್ರೀ ಎನ್ ಗುರುಪ್ರಸಾದ್ ಹಾಗೂ ಚಿಕ್ಕಮಗಳೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.