ಹಾಸನ : (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿಯ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಘಟನೆ ಹಾಸನದಲ್ಲಿ ನಡೆದಿದೆ. ಬಿಜೆಪಿಗೆ ಬೇರೆ ಪಕ್ಷದ ಕಾರ್ಯಕರ್ತರನ್ನು ಸೇರಿಸುವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಹಾಸನದ ಅರಸೀಕೆರೆ ವೀರಶೈವ ಕಲ್ಯಾಣಮಂಟಪದಲ್ಲಿ ಇಂದು ಬಿಜೆಪಿಯ ಎಂಎಲ್ಸಿ ಅಭ್ಯರ್ಥಿಯನ್ನು ಗೆಲ್ಲಿಸುವ ಕುರಿತಾಗಿ ಸಭೆ ಆಯೋಜನೆ ಗೊಂಡಿತ್ತು ಅಂತೆಯೇ ಸಭೆ ನಡೆಯಿತು.
ಸಭೆಯ ಬಳಿಕ ಕಾಂಗ್ರೆಸ್ ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಸೇರುವವರನ್ನು ಪಕ್ಷ ಸೇರ್ಪಡೆ ಮಾಡುವ ಕಾರ್ಯಕ್ರಮವಿತ್ತು. ಈ ಸಂದರ್ಭದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತನೊಬ್ಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಆತನಿಗೆ ಉಳಿದ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಸಭೆಯಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಹಾಜರಿದ್ದರು. ಆದರೆ ಎಷ್ಟೇ ಪ್ರಯತ್ನ ಪಟ್ಟರೂ ಕೂಡ ಮಾರಾಮಾರಿಯನ್ನು ತಡೆಯಲು ಯಾರಿಂದಲೂ ಆಗಲಿಲ್ಲ ಎಂದು ತಿಳಿದುಬಂದಿದೆ.

0 Comments