ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮಧ್ಯ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಬನ್ನೂರು ಗ್ರಾಮದಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಿಕಪ್ ವಾಹನದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ನಡೆಸಲೆಂದು ಅಕ್ರಮವಾಗಿ ಈತ ಮಧ್ಯ ಸಾಗಿಸುತ್ತಿದ್ದ ಎಂಬ ಸುದ್ದಿಯನ್ನು ಖಚಿತ ಪಡಿಸಿಕೊಂಡು ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತ ಆರೋಪಿಯಿಂದ 17,582 ಮೌಲ್ಯದ ಮಧ್ಯವನ್ನು ಹಾಗೂ ಆತ ಮಧ್ಯ ಸಾಗಾಟ ನಡೆಸಲು ಬಳಸಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.