ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಜೂಜಾಟ ಪ್ರಕರಣಗಳು ನಡೆಯುತ್ತಲೇ ಇದೆ. ಪೊಲೀಸರು ಬಹಳಷ್ಟು ಆರೋಪಿಗಳನ್ನು ಈ ಹಿಂದೆಯೇ ಬಂಧಿಸಿದ್ದರು ಕೂಡ ಅಲ್ಲಲ್ಲಿ  ಜೂಜುಕೋರರು ತಮ್ಮ ಅಕ್ರಮ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸೀಗೆಹಡ್ಲು ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರುಜನ ಆರೋಪಿಗಳನ್ನು ಪೊಲೀಸರು ಹಣದ ಸಮೇತ ಸೆರೆ ಹಿಡಿದಿದ್ದಾರೆ. ಆರೋಪಿಗಳಿಂದ 19,950 ರೂ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಈ ಕುರಿತಾಗಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕಾರ್ಯಾಚರಣೆಯಲ್ಲಿ ಕಡೂರು ಪೊಲೀಸ್ ಠಾಣಾ ಪಿಎಸ್ಸೈ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಪಾಲ್ಗೊಂಡು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಈ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಕಡೂರು ಪೊಲೀಸ್ ಠಾಣಾ ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ.