ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಕೊಪ್ಪದ ಗುಡ್ಡೇತೋಟ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಉರುಳಿದ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ  ತಾಲೂಕಿನ ಗುಡ್ಡೇತೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ  ವಲಯದಲ್ಲಿ ಕಾರು ತಲೆಕೆಳಗಾಗಿ ರಸ್ತೆಯ ಪಕ್ಕದಲ್ಲಿರುವ ಹಳ್ಳಕ್ಕೆ ಉರುಳಿದೆ. 

ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ, ಕಾರಿನ ಮುಕ್ಕಾಲು ಭಾಗ ಹಾನಿಯಾಗಿದ್ದು ಸ್ಥಳೀಯ ನಿವಾಸಿಗಳ ಸಹಾಯದಿಂದ ಕಾರನ್ನು ಹಳ್ಳದಿಂದ ಮೇಲಕ್ಕೆತ್ತಲಾಗಿದೆ.