ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ನೀರಿನ ಟ್ಯಾಂಕ್ ಕ್ಲೀನ್ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ ದುರ್ಘಟನೆ ಕಡೂರಿನಲ್ಲಿ ನಡೆದಿದೆ. ಮನೆಯ ನೀರಿನ ಟ್ಯಾಂಕ್ ಕ್ಲೀನ್ ಮಾಡಲು ಹೋದಾಗ ಈ ಘಟನೆ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ನಗರದ ದೊಡ್ಡ ಪೇಟೆಯ ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ತೆರಳಿದ ಇಬ್ಬರು ಕೆಲಸಗಾರರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರನ್ನು ಕುಮಾರ್ ಹಾಗೂ ವಸಂತ್ ಎಂದು ಗುರುತಿಸಲಾಗಿದೆ. ಖಲೀಂ ಎಂಬ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಕುರಿತಾಗಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. 

ತನು ಕೊಟ್ಟಿಗೆಹಾರ, ವರದಿಗಾರರು.