ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ ) ಕ್ರೂಸರ್ ವಾಹನ ವೊಂದು ಪಲ್ಟಿಯಾಗಿ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಮದುವೆ ಮುಗಿಸಿಕೊಂಡು ಧರ್ಮಸ್ಥಳದಿಂದ ಹಿಂದಿರುಗುತ್ತಿದ್ದ ಕ್ರೂಸರ್ ವಾಹನವೊಂದು ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಬಿದ್ದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಅಪಾಯಗಳು ಸಂಭವಿಸಿಲ್ಲ, ವಾಹನದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ವಾಹನದಲ್ಲಿ ಸಿಲುಕಿದ್ದವರನ್ನು ಅಲ್ಲೇ ಇದ್ದ ಪ್ರವಾಸಿಗರು ಮೇಲಕ್ಕೆ ಕರೆತರುವಲ್ಲಿ ಸಹಾಯ ಮಾಡಿದ್ದಾರೆ. ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

0 Comments