ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಅತಿಯಾಗಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನ.12 ರಿಂದ ನ.15 ರ ವರೆಗೆ ರಾಜ್ಯದ ಬೆಂಗಳೂರು, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬ ಕಾರಣಕ್ಕೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಹಲವೆಡೆಗಳಲ್ಲಿ ರೈತರು ಬೆಳೆದ ಹಲವು ಬೆಳೆಗಳು ನಾಶವಾಗಿದೆ. ಒಂದೆಡೆ ಬೆಂಬಲ ಬೆಲೆ ಸಿಗದೆ ರೈತ ಕಂಗಲಾಗಿದ್ದಾನೆ, ಇನ್ನೊಂದೆಡೆ ನಿರಂತರವಾದ ಮಳೆಯು ರೈತನ ಪಾಲಿಗೆ ಮಾರಕವಾಗಿ ಇತ್ತೀಚಿನ ದಿನಗಳಲ್ಲಿ ಪರಿಣಮಿಸಿದೆ. ಮೀನುಗಾರರು ಹಾಗೂ ಕೃಷಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮುಂದಿನ ಮೂರ್ನಾಲ್ಕು ದಿನಗಳ ಕಾಲ ತಮ್ಮ ತಮ್ಮ ಕೆಲಸವನ್ನು ಮಾಡಬೇಕೆಂದು ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.

0 Comments