ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಇತ್ತೀಚೆಗಷ್ಟೆ ನಡೆದ ಚಿಕ್ಕಮಗಳೂರು ನಗರಸಭಾ ಚುನಾವಣೆಯ ಮತ ಎಣಿಕೆ ಕಾರ್ಯದ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.

https://chat.whatsapp.com/I2r7uKjzrF9AlSwMn2xClg
ನಗರಸಭೆಯ 25 ವಾರ್ಡ್ ಗಳ ಚುನಾವಣೆಗೆ ಸ್ಪರ್ಧೆ ನಡೆಸಿದ್ದ 146 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗುವ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಉಂಟಾಗದಂತೆ ನೋಡಿಕೊಳ್ಳುವ ಸಲುವಾಗಿ ಜಿಲ್ಲಾಧಿಕಾರಿಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದಾರೆ.

ನಿಷೇಧಾಜ್ಞೆ ಜಾರಿ : 

ಡಿಸೆಂಬರ್ 30 ರಂದು ಚಿಕ್ಕಮಗಳೂರಿನ ಐ ಡಿ ಎಸ್ ಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾಲೇಜಿನ ಸುತ್ತಲಿರುವ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 06 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಆಗುವವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 30 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಚಿಕ್ಕಮಗಳೂರು ನಗರ ಹಾಗೂ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲ ನಮೂನೆಗಳ ಮದ್ಯದಂಗಡಿಗಳನ್ನು ತೆರೆಯದಂತೆ ಹಾಗೂ ಶೇಖರಣೆ ಮಾಡದಂತೆ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶಿಸಿದ್ದಾರೆ. ಹಾಗೂ ಅಕ್ರಮವಾಗಿ ಮದ್ಯ ಮಾರಾಟ ಅಥವಾ ಸಂಗ್ರಹಣೆ ಮಾಡಿದಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.