ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ರಾಷ್ಟ್ರಾದ್ಯಂತ ನಡೆಸಿಕೊಂಡು ಬರುತ್ತಿರುವ ಜನಾರೋಗ್ಯವೇ ರಾಷ್ಟ್ರ ಶಕ್ತಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ಪಿಎಫ್ಐ ಚಿಕ್ಕಮಗಳೂರು ವತಿಯಿಂದ ಕಾರ್ಯಕ್ರಮ ನಡೆಯಿತು.
ನಗರದ ಹನುಮಂತಪ್ಪ ವೃತ್ತದಿಂದ ಸಂತೆ ಮೈದಾನದ ತನಕ ಆಕರ್ಷಕ ಮ್ಯಾರಥಾನ್ ರ‌್ಯಾಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ನ ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಂಡಿದ್ದರು. ಪಾಪ್ಯುಲರ್ ಫ್ರಂಟ್ ಚಿಕ್ಕಮಗಳೂರು ಜಿಲ್ಲಾ ಸಮಿತಿ ಸದಸ್ಯರಾದ ಅಝ್ಮತ್ ಪಾಷ ರವರು ಧ್ವಜ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮ್ಯಾರಥಾನ್ ರ‌್ಯಾಲಿಯ ನಂತರ ಯೋಗ ಹಾಗೂ ಕಲಾ ಪ್ರದರ್ಶನ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಪಿಎಫ್ಐ ಚಿಕ್ಕಮಗಳೂರು ಜಿಲ್ಲಾ ಸಮಿತಿ ಸದಸ್ಯರಾದ ಶರೀಫ್ ಎಂ.ಯು ರವರು ಮಾತನಾಡಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಪಿಎಫ್ಐ ನಗರ ಅಧ್ಯಕ್ಷರಾದ ನಾಸೀರ್ ಪಾಷ, ಕಾರ್ಯದರ್ಶಿ ಮುಬಾರಕ್ ನೇತೃತ್ವದ ತಂಡವು ಯೋಗ ಹಾಗೂ ಕಲಾ ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷರಾದ ಗೌಸ್ ಮುನೀರ್, ಪ್ರಧಾನ ಕಾರ್ಯದರ್ಶಿ ಜಮೀಲ್ ಖಾನ್, ದಲಿತ ಮುಖಂಡರಾದ ಶ್ರೀನಿವಾಸ್ ದಂಟರಮಕ್ಕಿ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಸಮಿತಿ ಸದಸ್ಯರಾದ ಜುನೈದ್ ಮೌಲಾನ, ಅಲಿ ಮಸಿದಿಯ ಇಮಾಮರಾದ ಅಬ್ದುಲ್ ರಝಾಕ್ ಖಾರಿ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

0 Comments