ಹಾಸನ : (ನ್ಯೂಸ್ ಮಲ್ನಾಡ್ ವರದಿ) ಬೆಳಗ್ಗಿನ ಜಾವ ಮನೆಯ ಬಾಗಿಲು ಮುರಿದು ಕಳ್ಳರು ಕಳ್ಳತನ ನಡೆಸಿರುವ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದ ವೇದಮೂರ್ತಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಬಾಗಿಲು ಮುರಿದು ನಗದು ಹಾಗೂ ಚಿನ್ನಾಭರಣಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ಮಲೆನಾಡು ಭಾಗದಲ್ಲಿ ಕಾಫಿ, ಅಡಿಕೆ ಕೊಯ್ಲಿನ ಸಮಯವಾದ್ದರಿಂದ ವೇದಮೂರ್ತಿಯವರು ತಮ್ಮ ತೋಟಕ್ಕೆ ಕಾಫಿ ಕೊಯ್ಲು ಮಾಡಲು ತೆರಳಿದ್ದರು ಈ ಸಮಯದಲ್ಲಿ ಮನೆಗೆ ನುಗ್ಗಿ ಕನ್ನ ಹಾಕಿರುವ ಕಳ್ಳರು ಚಿನ್ನಾಭರಣ ಹಾಗೂ ಹಣವನ್ನು ದೋಚಿದ್ದಾರೆ.
ಮನೆಯ ಮಾಲೀಕ ವೇದಮೂರ್ತಿ ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ದೂರು ಸಲ್ಲಿಸಿದ್ದಾರೆ. ದೂರಿನ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದೆ. ಘಟನೆಯ ಕುರಿತು ಸಕಲೇಶಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಳ್ಳರಿಗೆ ಬಲೆ ಬೀಸಿದ್ದಾರೆ. ಆದಷ್ಟು ಬೇಗ ಕಳ್ಳರನ್ನು ಸೆರೆ ಹಿಡಿದು ಶಿಕ್ಷೆಗೆ ಗುರಿಪಡಿಸಬೇಕೆಂದು ಮನೆಯವರು ಒತ್ತಾಯಿಸಿದ್ದಾರೆ.

0 Comments