ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕೊಪ್ಪ ಪಟ್ಟಣದಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮಾ ಎಂಬಾಕೆ ಆತ್ಮಹತ್ಯೆಗೀಡಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯು ಮೂಲತಃ ತರೀಕೆರೆಯ ವಿಳಾಸಿಯಾಗಿದ್ದು ಕೊಪ್ಪದ ಕುದುರೆಗುಂಡಿಯಲ್ಲಿರುವ ಸಂಬಂಧಿಕರ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ನಡೆಸುತ್ತಿದ್ದಳು ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಕಾರಣಗಳೇನು ಎಂದು ತಿಳಿದುಬಂದಿಲ್ಲ, ಸುಮಾಳ ಆತ್ಮಹತ್ಯೆಯ ಕುರಿತಾಗಿ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

0 Comments