ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ವೀರಾಪುರ ಹೊಸೂರು ಗೇಟ್ ಬಳಿ ನಡೆದ ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಾಬು ಹಾಗೂ ಸೇತು ಎಂಬ ಇಬ್ಬರು ಮೃತ ದುರ್ದೈವಿಗಳು.
ಮೃತರು ಬೀರೂರಿನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬೀರೂರು ಕಡೆಗೆ ಸಾಗುತ್ತಿದ್ದ ಬೈಕ್ ಅಜ್ಜಂಪುರದ ಕಡೆಗೆ ತೆರಳುತ್ತಿದ್ದ ಕಾರ್ ನಡುವೆ ಮುಖಾಮುಖಿಯಾಗಿ ನಡೆದ ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯ ಕುರಿತಾಗಿ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನು ಕೊಟ್ಟಿಗೆಹಾರ, ವರದಿಗಾರರು

0 Comments