ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ಪ್ರಕರಣ ನಡೆದಿದೆ.
ಹೊರ ಊರಿನಿಂದ ಕೆಲಸಕ್ಕೆಂದು ಬಂದು ವಾಸವಿದ್ದ ಕುಟುಂಬದ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೇಮ ಕುಮಾರ್(ಹೆಸರು ಬದಲಾಯಿಸಲಾಗಿದೆ) ಎಂಬಾತ ಪುಸಲಾಯಿಸಿ ಗರ್ಭಿಣಿ ಮಾಡಿದ್ದು, ಪ್ರಕರಣ ಹೊರ ಬರುತ್ತಿದ್ದಂತೆ ಸ್ಥಳೀಯ ಪಿಡಿಓ ಅವರು ಚಿಕ್ಕಮಗಳೂರಿನ ಶಿಶು ಅಭಿವೃದ್ಧಿ ಇಲಾಖೆಗೆ ದೂರು ನೀಡಿದ್ದು, ಇಲಾಖೆಯ ಮೂಲಕ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ ಕೆಲವು ಸ್ಥಳೀಯ ಮುಖಂಡರು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನ ಪಟ್ಟಿದ್ದಾರೆ, ಆದರೆ ಕುಟುಂಬಸ್ಥರು ಸ್ಥಳೀಯ ಸಹಕಾರದೊಂದಿಗೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಬಾಳೆಹೊನ್ನೂರು ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

0 Comments