ಚಿಕ್ಕಮಗಳೂರು : ರಾಷ್ಟ್ರೀಯ ಹೆದ್ದಾರಿ 73, ಚಾರ್ಮಾಡಿ ಘಾಟಿಯಲ್ಲಿ ಈ ಹಿಂದೆ ಬೆಳಗ್ಗೆ 6 ಗಂಟೆಯಿಂದ ಸಂಜೆ 07 ಗಂಟೆಯ ವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿಯಿತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ವಿಭಾಗವು ದಿನದ 24 ಗಂಟೆಯೂ ಕೂಡ ಸಂಚಾರಕ್ಕೆ ಅನುಮತಿ ಕಲ್ಪಿಸಿ ಆದೇಶ ಹೊರಡಿಸಿದೆ.
ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಈ ಹಿಂದೆ ಕೇವಲ ನಿಗದಿತ ಸಮಯಗಳಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುಮತಿಯಿತ್ತು ಆದರೆ ಪ್ರಸ್ತುತ ದಿನದ 24 ಗಂಟೆಗಳ ಕಾಲ ವಾಹನ ಸಂಚಾರ ಮಾಡಲು ಅನುಮತಿ ದೊರೆತಿದೆ.
ಕಂಟೈನರ್ ಗಳು, ರಾಜಹಂಸ ಬಸ್, 12 ಚಕ್ರದ ಸರಕು ಸಾಗಣೆ ಮಾಡುವ ವಾಹನಗಳಿಗೆ ಅನುಮತಿಸಲಾಗಿದೆ. ಈ ಆದೇಶವನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ ಡಾಕ್ಟರ್ ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.
ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಕಾರು ದುರಂತ :
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯ ಸಮೀಪದ ಮಲಯಮಾರುತದ ಬಳಿ ಇದ್ದಕ್ಕಿದ್ದಂತೆ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ನಡೆದಿದೆ.
ಮಹಿಂದ್ರ ಲೋಗನ್ ಕಾರಿನಲ್ಲಿ ಮಂಗಳೂರಿನ ದೇರಳಕಟ್ಟೆ ಯಿಂದ ಜಾವಗಲ್ ಕಡೆಗೆ ನಾಲ್ವರು ಪ್ರಯಾಣಿಕರು ಪ್ರವಾಸ ಹೋಗುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಕುರಿತಾದ ಮಾಹಿತಿ ದೊರಕುತ್ತಿದ್ದಂತೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಾಯತ್ರಿ ಮತ್ತು ಠಾಣಾ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆಯ ನಂತರದಲ್ಲಿ ಈ ಘಟನೆಗೆ ನಿಖರ ಕಾರಣಗಳೇನು ಎಂದು ತಿಳಿದು ಬರಬೇಕಿದೆ.
ತನು ಕೊಟ್ಟಿಗೆಹಾರ ವರದಿಗಾರರು.

0 Comments